ಕೇಂದ್ರ ಸರ್ಕಾರದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ
ಕೇಂದ್ರ ಸರ್ಕಾರ ಶಾಲಾ- ಕಾಲೇಜು ಪಠ್ಯಪುಸ್ತಕಗಳಲ್ಲಿ ಇಂಡಿಯಾ ಪದವನ್ನು ಭಾರತ ಎಂದು ಬದಲಾಯಿಸಲು ಮುಂದಾಗಿರುವುದರ ಹಿಂದೆ ಚುನಾವಣಾ ಉದ್ದೇಶವಿದೆ. ಬಿಜೆಪಿಯವರು ಅಭಿವೃದ್ಧಿ ವಿಚಾರ ಬಿಟ್ಟು ಸದಾ ಇಂತಹ ವಿಷಯಗಳನ್ನಿಟ್ಟುಕೊಂಡೇ ರಾಜಕೀಯ ಮಾಡುತ್ತಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕೆಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.