ಖಾತೆ ಬದಲಾವಣೆಯಿಂದ ಬೇಸರಗೊಂಡ್ರಾ ಸಚಿವ ಮಾಧುಸ್ವಾಮಿ?

ಗುರುವಾರ, 21 ಜನವರಿ 2021 (12:01 IST)
ಬೆಂಗಳೂರು : ಖಾತೆ ಬದಲಾವಣೆ ಹಿನ್ನಲೆಯಲ್ಲಿ ಸಚಿವ ಮಾಧುಸ್ವಾಮಿ ಬೇಸರಗೊಂಡಿದ್ದಾರೆ. ಹಾಗಾಗಿ  ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿಯಲ್ಲಿರುವ ಮಾಧುಸ್ವಾಮಿ ಅವರು  ಕಾನೂನು, ಸಂಸದೀಯ ವ್ಯವಹಾರಗಳ ಖಾತೆಗಿಂತಲೂ ಸಣ್ಣ ನೀರಾವರಿ ಖಾತೆ ವಾಪಾಸ್ ಪಡೆದಿದ್ದಕ್ಕೆ ಹೆಚ್ಚು ಬೇಸರಗೊಂಡಿದ್ದಾರೆ ಎನ್ನಲಾಗಿದೆ.  ಈ ಹಿನ್ನಲೆಯಲ್ಲಿ ಮಾಧುಸ್ವಾಮಿಯ ಮನವೊಲಿಕೆಗೆ ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಆದಕಾರಣ  ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗದೆ ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಮಾಧುಸ್ವಾಮಿ ಡಾ.ಶಿವಕುಮಾರ ಶ್ರೀಗಳ 2ನೇ ಪುಣ್ಯಸ್ಮರಣೆಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ