ವಕ್ಫ್ ವಿರುದ್ಧ ಸ್ವಾಮೀಜಿಗಳು ಒಗ್ಗಟ್ಟಾಗಿ ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಬಹುದು. ವಕ್ಫ್ ಬೋರ್ಡ್ ಎನ್ನುವುದೇ ಇರಬಾರದು. ಅಷ್ಟು ಪ್ರೀತಿಯಿದ್ದರೆ ನಿಮ್ಮ ಮನೆ, ಸೈಟು ಬರೆದು ಕೊಡಿ ಎಂದು ಸ್ವಾಮೀಜಿ ಹೇಳಿದ್ದರು.
ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಇದರ ಬಗ್ಗೆ ಸಚಿವ ಮಹದೇವಪ್ಪ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಧ್ವೇಷ ಹರಡುವ ಇಂತಹವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೊಂದು ಹೋರಾಟ ನಡೆಸಿ ಬಾಬಾ ಸಾಹೇಬರು ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು,ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು. ಇದು ಮೂಲಭೂತ ಹಕ್ಕು. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ಇದೆ. ಯಾರಾದರೂ ಹಾಗೆ ಹೇಳಿದರೆ ಅದು ತಪ್ಪು ಎಂದಿದ್ದಾರೆ.