ಬೆಂಗಳೂರಿನ 2ನೇ ಏರ್‌ಪೋರ್ಟ್‌ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಚಿವ ಎಂಬಿ ಪಾಟೀಲ್

Sampriya

ಗುರುವಾರ, 10 ಏಪ್ರಿಲ್ 2025 (18:38 IST)
Photo Courtesy X
ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ 2ನೇ ಏರ್‌ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡ ಇನ್ನೂ ಮೂರು ತಿಂಗಳಿನಲ್ಲಿ ಅಭಿಪ್ರಾಯವನ್ನು ತಿಳಿಸಲಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.

ಈ ವರದಿಯನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣಿತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರ್ಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ‌ ನಿಲ್ದಾಣವನ್ನು  ಎಲ್ಲಿ ಮಾಡಿದರೆ ಸೂಕ್ತ? ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದ್ದಾರೆ.

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರ ವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್‌ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ 2ನೇ ಏರ್ಪೋರ್ಟ್ ಅಭಿವೃದ್ಧಿ ಮಾಡಬಹುದು. ಇಲ್ಲದೇ ಹೋದ್ರೆ 2040ನೇ ಇಸವಿ ಬಂದರೂ ವಿಮಾನ‌ ನಿಲ್ದಾಣ ಆಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ