ವಿವಾದಗಳಿಗೆ ಅವಕಾಶ ನೀಡದೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯು ಆರಂಭವಾಗಲಿದ್ದು, ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತಗಳು ಪಣ ತೊಡಬೇಕು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಡನೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ ಪರೀಕ್ಷೆಯ ಕುರಿತಾಗಿ ಹೈಕೋರ್ಟ್ ನೀಡಿರುವ ಸೂಚನೆಗಳನ್ನು ಚಾಚೂ ತಪ್ಪದೆ ನಾವೆಲ್ಲರೂ ಪಾಲಿಸಬೇಕು ಎಂದಿದ್ದಾರೆ.
ರಾಜ್ಯಾದ್ಯಂತ ಒಟ್ಟು 2,879 ಪರೀಕ್ಷಾ ಕೇಂದ್ರಗಳಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.