ಕರ್ನಾಟಕ ಲೋಕಸೇವಾ ಆಯೋಗದ ಆದೇಶದ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಶನಿವಾರ, 17 ನವೆಂಬರ್ 2018 (14:15 IST)
ಬೆಂಗಳೂರು :'ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಆದೇಶವೊಂದರ ಬಗ್ಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ನಾಲ್ಕು ಪುಟಗಳ ಪತ್ರ ಬರೆದು, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾವಂತರಿಗೆ ಸಾಮಾನ್ಯ ವರ್ಗದಡಿ ಗೆಜೆಟೆಡ್ ಹುದ್ದೆ ಪಡೆಯಲು ಇರುವ ಅವಕಾಶವನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಿತ್ತುಕೊಳ್ಳಲು ಮುಂದಾಗಿರುವುದು ಸರಿಯಲ್ಲ’ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಅಲ್ಲದೇ 'ಕೆಪಿಎಸ್‌ಸಿ ನಡೆಯಿಂದ ಪರಿಶಿಷ್ಟರು ಹಾಗೂ ಹಿಂದುಳಿದ ಸಮುದಾಯದವರಿಗೆ ಅನ್ಯಾಯವಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ' ಎಂದೂ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.