ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದ ಸಚಿವ ಪ್ರಿಯಾಂಕ್ ಖರ್ಗೆ
ಗುರುವಾರ, 15 ಜೂನ್ 2023 (13:26 IST)
ದೂರುಗಳು ಕುರಿತಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದರು.
ಸಿಎಂ ಸಿದ್ದರಾಮಯ್ಯ ತನಿಖೆಗೆ ಕಳೆದ ಮೇ.29 ರಂದು ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖೆಗಾಗಿ ಯೋಜನಾ ಇಲಾಖೆಯ ಐವರು ಅಧಿಕಾರಿಗಳ ತಂಡವನ್ನು ಸರ್ಕಾರ ರಚಿಸಿದ್ದು, ಅಧಿಕಾರಿಗಳ ತಂಡ ಜೂ.12ರಿಂದ ಕಲಬುರಗಿಯಲ್ಲಿ ಬೀಡು ಬಿಟ್ಟು ತನಿಖೆ ನಡೆಸುತ್ತಿದೆ. ಕೆಕೆಆರ್ಡಿಬಿಯಲ್ಲಿರುವ ದಾಖಲಾತಿಗಳು ಮತ್ತು ಕೈಗೊಂಡ ಕಾಮಗಾರಿಗಳ ಕುರಿತು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಕೆಆರ್ಡಿಬಿಯನ್ನು ತಮ್ಮ ಆದಾಯದ ಕಾಮಧೇನು ಮಾಡಿಕೊಂಡಿದ್ದಾರೆ. ಕಾಮಗಾರಿಗಳಲ್ಲಿ, ಮತ್ತು ಟೆಂಡರ್ಗಳಲ್ಲಿ ಸಾಕಷ್ಟು ಅಕ್ರಮ ನಡೆಸಿದ್ದಾರೆ ಎಂದು ಈ ಹಿಂದೆ ಶಾಸಕರಾಗಿದ್ದ ಪ್ರಿಯಾಂಕ್ ಖರ್ಗೆ ಮೇಲಿಂದ ಮೇಲೆ ಆರೋಪಿಸುತ್ತಲೇ ಇದ್ದರು. ತಮ್ಮ ಸರ್ಕಾರ ಜಾರಿಗೆ ಬಂದ್ರೆ, ಕೆಕೆಆರ್ಡಿಬಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರವನ್ನು ತನಿಖೆ ಮಾಡಿಸುತ್ತೇವೆ.
ಇದು ಕಲಬುರಗಿ ಜನರಿಗೆ ನಾವು ಕೊಡುತ್ತಿರುವ 6ನೇ ಗ್ಯಾರಂಟಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಮನವಿ ಮೇರೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.