ಮಾಧ್ಯಮಗಳ ಮೇಲೆ ಸಚಿವ ರಮೇಶ ಜಾರಕಿಹೊಳಿ ಸಿಡಿಮಿಡಿ

ಶನಿವಾರ, 21 ಜುಲೈ 2018 (19:03 IST)
ಮಾಧ್ಯಮಗಳು ಕಳೆದ ಎರಡು ತಿಂಗಳಿನಿಂದ ಸುಳ್ಳು ವರದಿ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿವೆ ಎಂದು ಮಾಧ್ಯಮಗಳ ಮೇಲೆ ಹರಿ ಹಾಯ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಆಜ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದೆ. ಅದರ ಬಗ್ಗೆ ಮಾಧ್ಯಮಗಳು ಗುಂಪುಗಾರಿಕೆಯಿದೆ ಎಂದು ಸುಳ್ಳು ವರದಿ ಬಿತ್ತರಿಸಿದವು ಎಂದರು. ಮುಖ್ಯಮುಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಣ್ಣೀರು ಹಾಕುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರ ಕಾಟ ಸಿ.ಎಂ ಅವರಿಗಿಲ್ಲ. ಆದರೆ ಬಿಜೆಪಿಯವರ ಕಾಟ ಹೆಚ್ಚಾಗಿದೆ. ಕುಮಾರಸ್ವಾಮಿ ಅವರು ಭಾವನಾತ್ಮಕವಾಗಿ ಕಣ್ಣೀರು ಹಾಕಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷದದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು. ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಜಿಲ್ಲೆಯನ್ನಾಗಿ ಮಾಡಿದರೆ ಅದಕ್ಕೆ  ಸಮ್ಮತಿ ಇದೆ ಎಂದರು.
ಸಹೋದರ ಸತೀಶ ಜಾರಕಿಹೊಳಿ ಅವರು ಸಹ ತಮ್ಮ ಆಪ್ತರೊಂದಿಗೆ ಪ್ರವಾಸಕ್ಜೆ ಹೊರಟಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಕಾದರೆ ಹೋಗಲಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ