ಬೆಳ್ಳಂಬೆಳಿಗ್ಗೆ ಸಚಿವರ ಸಿಟಿ ರೌಂಡ್

ಬುಧವಾರ, 3 ಅಕ್ಟೋಬರ್ 2018 (18:47 IST)
ಬೆಳ್ಳಂಬೆಳಿಗ್ಗೆ ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ  ಸಚಿವ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ್ರು. ಮೂಲಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಸ್ವಚ್ಛತೆ ವೀಕ್ಷಣೆ ಮಾಡಿದರು. ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿದರು. ಸಮರ್ಪಕವಾಗಿ ಕಸ ವಿಲೇವಾರಿ ಆಗದಿರುವದಕ್ಕೆ ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ ಆದರು.

ನಗರದ ವಿವಿಧ ಪ್ರದೇಶಗಳಲ್ಲಿ ಮ್ಯಾನ್ ಹೋಲ್ ಗಳು ಮುಚ್ಚದೆ ಇದ್ದಿದ್ದನ್ನು ನೋಡಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಾರ್ಡ ನ.15ರ ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಯ ಹಾಜರಾತಿ ಚೆಕ್ ಮಾಡಿದರು. ಸಚಿವರಿಗೆ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ, ಮತ್ತಿತರ ಅಧಿಕಾರಿಗಳು ಸಾಥ್ ನೀಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ