ಬೆಂಗಳೂರು : ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದು,
ಈ ಕಾರ್ಯಕ್ರಮದ ರೂಪುರೇಷೆ ಕುರಿತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉನ್ನತ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ಶ್ರೀಗಳನ್ನು ಭೇಟಿ ಮಾಡಿದ ಸಚಿವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಚಿಂತನೆ ಮತ್ತು ಆಶಯಗಳನ್ನು ಹಂಚಿಕೊಂಡರು.
ಶ್ರೀಗಳ ಜೊತೆ ಸುಮಾರು ಎರಡು ತಾಸು ವಿಚಾರ ವಿನಿಮಯ ನಡೆಸಿದ ಸಚಿವರು, ಕಾರ್ಯಕ್ರಮದ ಯಶಸ್ಸಿಗೆ ಮಾರ್ಗದರ್ಶನ ಕೋರಿದರು. ಅಲ್ಲದೇ, ಕಾರ್ಯಕ್ರಮಕ್ಕೆ ಜನರನ್ನು ಸಮಾಗಮಗೊಳಿಸುವ ಕುರಿತು ಚರ್ಚಿಸಿದರು.