ಸೇಫ್ ಸಿಟಿ ಪ್ರಾಜೆಕ್ಟ್ ಬಗ್ಗೆ ಮಾಹಿತಿ ಪಡೆಯಲಿರುವ ಮಿನಿಸ್ಟರ್

ಶುಕ್ರವಾರ, 16 ಜೂನ್ 2023 (13:45 IST)
ಗೃಹ ಸಚಿವರಾದ ಮೇಲೆ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಗೆ ಗೃಹಸಚಿವ ಪರಮೇಶ್ವರ್ ಭೇಟಿ ನೀಡಿದ್ದಾರೆ.ಭೇಟಿ ನೀಡಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.11 ಗಂಟೆಗೆ ಪೊಲೀಸ್ ಆಯುಕ್ತರ ಕಚೇರಿಗೆ ಡಾ.ಜಿ ಪರಮೇಶ್ವರ್ ಭೇಟಿ ನೀಡಲಿದ್ದು,ಕಮಾಂಡೆಂಟ್ ಸೆಂಟರ್ ವೀಕ್ಷಣೆ ಮಾಡಲಿದ್ದಾರೆ.ಸೇಫ್ ಸಿಟಿ ಪ್ರಾಜೆಕ್ಟ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಪೊಲೀಸ್ ಕಮಿಷನರ್ ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಹೋಂ ಮಿನಿಸ್ಟರ್ ಮೀಟಿಂಗ್ ಸಹ ಮಾಡಲಿದ್ದಾರೆ. ಅಪರಾಧ ಚಟುವಟಿಕೆಗಳ ನಿಯಂತ್ರಣ, ರೌಡಿ ಅಕ್ಟಿವಿಟೀಸ್ ಕಂಟ್ರೋಲ್, ಸೈಬರ್ ಪ್ರಕರಣ ಗಳ ಬಗ್ಗೆ ಚರ್ಚೆ ನಡೆಸಲಿದ್ದು,ಸಭೆ ಬಳಿಕ ಸುದ್ದಿಗೋಷ್ಠಿಯನ್ನ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಡೆಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ