ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ.
ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.