ಅಯ್ಯಪ್ಪ ಮಾಲಾಧಾರಿಗಳಿಗೆ ಆಪತ್ಬಾಂಧವರಾದ ಸಚಿವ ಖಾದರ್!

ಶನಿವಾರ, 14 ಜನವರಿ 2017 (11:19 IST)
ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಭಕ್ತರ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಶಕ್ರವಾರ ನಡೆದಿದ್ದು, ಈ ವೇಳೆ ಭಕ್ತರು ಅಸಹಾಯಕರಾಗಿ ನಿಂತಿದ್ದ ಸಂದರ್ಭದಲ್ಲಿ ಆಹಾರ ಮತ್ತ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಭಕ್ತರಿಗೆ ಸಹಾಯ ಮಾಡಿ ರಕ್ಷಣೆ ಮಾಡಿದ್ದಾರೆ. 
 
ಅಯ್ಯಪ್ಪ ಮಾಲಾಧಾರಿಗಳು ಧಾರವಾಡ ಜಿಲ್ಲೆಯವರಾಗಿದ್ದು, ಇಂಡಿಕಾ ಕಾರಿನಲ್ಲಿ ಶಬರಿಮಲೆಗೆ ತೆರಳಿದ್ದರು. ನಂತರ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ದಿಢೀರ ಬೆಂಕಿ ಕಾಣಿಸಿದ್ದು, ನೋಡುತ್ತಿದ್ದಂತೆ ಬೆಂಕಿ ತೀವ್ರವಾಗತೊಡಗಿತ್ತು.
 
ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಚಿವ ಯು.ಟಿ.ಖಾದರ್ ಸಂಚರಿಸುತ್ತಿದ್ದು, ಘಟನೆಯನ್ನು ಕಂಡು ತಮ್ಮ ವಾಹನ ನಿಲ್ಲಿಸಿ, ಉರಿಯುತ್ತಿರುವ ಕಾರಿನತ್ತ ಧಾವಿಸಿದರು. ತಕ್ಷಣವೇ ಶಬರಿಮಲೆ ಭಕ್ತರ ಕಾರಿನ ಬೆಂಕಿ ನಂದಿಸಲು ತಮ್ಮ ಕಾರಿನಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಹಾಗೂ ಸ್ಥಳದಲ್ಲಿದ್ದ ಮಣ್ಣು ಕೈಯಿಂದಲೇ ಬೆಂಕಿ ಮೇಲೆ ಹಾಕಿ ನಂದಿಸಲು ಪ್ರಯತ್ನಿಸಿದರು. ಬಳಿಕ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. 
 
ಅದಲ್ಲದೆ, ಅಯ್ಯಪ್ಪ ಮಾಲಾಧಾರಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ, ಹಬ್ಬಳ್ಳಿಗೆ ಹಿಂದಿರುಗಲ ಹಣಕಾಸು ನೆರವನ್ನು ಸಚಿವ ನೀಡಿ ಖಾದರ್ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ