ಕೇಂದ್ರ ಸಚಿವೆ ಉಮಾಭಾರತಿ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ್ ಖರ್ಗೆ

ಗುರುವಾರ, 20 ಏಪ್ರಿಲ್ 2017 (16:10 IST)
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ರಾಜೀನಾಮೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
 
ಇತರ ಪಕ್ಷಗಳ ನಾಯಕರ ಮೇಲೆ ಯಾವುದೇ ಆರೋಪಗಳು ಬಂದ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸುತ್ತಾರೆ. ಇದೀಗ ಸಚಿವೆ ಉಮಾಭಾರತಿ ಮೇಲೆ ಆರೋಪ ಬಂದಿರುವುದರಿಂದ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಹೊಣೆ ಸಂಪೂರ್ಣವಾಗಿ ಹೈಕಮಾಂಡ್‌ನದ್ದು. ಸೂಕ್ತ ಸಮಯದಲ್ಲಿ ಸೂಕ್ತ ವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತದೆ. ಯಾರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಾರೋ ನೋಡೋಣ ಎಂದರು.
 
ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಕಾಂಗ್ರೆಸ್ ಮುಖಂಡರು ಬದ್ಧರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಯಾರಿದ್ದಾರೋ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ