ಮಹಾದಾಯಿ ತೀರ್ಪು: ವಿಷ ಸೇವಿಸಿದ್ದ ಯುವಕರ ಆರೋಗ್ಯ ವಿಚಾರಿಸಿದ ಸಚಿವ ಕುಲಕರ್ಣಿ

ಶುಕ್ರವಾರ, 29 ಜುಲೈ 2016 (18:16 IST)
ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರು ವಿದ್ಯಾರ್ಥಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಚಿವ ವಿನಯ್ ಕುಲಕರ್ಣಿ ಕಿಮ್ಸ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ರೈತರ ಪರ ಸಂಘಟನೆಗಳು ಶಾಂತಿಯುತವಾಗಿ ಧರಣಿ ನಡೆಸಿದ್ದರು, ಆದರೆ, ನಿನ್ನೆಯ ಘಟನೆ ದುರಂತ ಎಂದು ತಿಳಿಸಿದರು.
 
ರೈತ ಮುಖಂಡರೆಲ್ಲರೂ ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕು. ಕುಡಿಯುವ ನೀರು ಪ್ರತಿಯೊಬ್ಬರಿಗೂ ಅವಶ್ಯಕ. ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಮುಂದಿನ ಹೋರಾಟ ರೂಪುರೇಷಗಳನ್ನು ಎಲ್ಲರೂ ಒಂದಾಗಿ ಚರ್ಚಿಸೋಣ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿಯಬೇಕು ಎಂದು ಆಗ್ರಹಿಸಿದರು.
 
ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ನಿನ್ನೆ ನಡೆದಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕೋರ್ಟ್ ಹಾಗೂ ಸರಕಾರಿ ಕಚೇರಿಗಳಿಗೆ ಬೆಂಕಿ ಹಂಚ್ಚಿದ್ದರಿಂದ ಪರಿಸ್ಥಿತಿಯನ್ನು ಹತೋಟೆಗೆ ತರಲು ಪೊಲೀಸರಿಗೆ ಲಾಠ್ ಚಾರ್ಚ್ ಮಾಡುವುದು ಅನಿವಾ4ಯವಾಗಿತ್ತು ಎಂದು ಸಚಿವ ವಿನಯ್ ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ