ಕೊರೊನಾ ರೋಗ ಲಕ್ಷಣಗಳಿಲ್ಲದವರನ್ನು ದಾಖಲಿಸಲಾಗುತ್ತಿರುವ ಸಾಂಸ್ಥಿಕ ಕ್ವಾರಂಟೈನ್ ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿವೆ.
ಗುಣಮಟ್ಟದ ಆಹಾರ ಮತ್ತು ಸಮರ್ಪಕ ಸ್ವಚ್ಛತೆ ಒದಗಿಸುವಂತೆ ಅರಣ್ಯ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ 43 ಸರಕಾರಿ ಹಾಗೂ 4 ಜನ ಖಾಸಗಿ ವೈದ್ಯರು ಸೇರಿ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಗ್ರೂಪ್ ಡಿ ಸೇರಿ 108 ಜನ ಆರೋಗ್ಯ ಸೇವೆ ಸಲ್ಲಿಸುತ್ತಿರುವವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕಾರಿ ಸಂಗತಿ ಎಂದರು.
ಕೊರೊನಾ ರೋಗಿಗಳ ವಿಷಯದಲ್ಲಿ ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ. ಸ್ವತಃ ನಾನೇ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿರುವೆ ಎಂದರು.