ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಅನ್ನುವುದು ಸಂವೇದನಶೀಲ, ಆಲೋಚನೆಯುಳ್ಳ ಆನೆ ತೂಕದ ವ್ಯಕ್ತಿಗೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರತಿಷ್ಠೆ ಅಲ್ಲ. ರಾಜ್ಯದ ಜನರ ಆಶೋತ್ತರಗಳನ್ನ ಈಡೇರಿಸುವಂತಿರಬೇಕು. ಆದರೆ ಈಗ ಹಾಗೆ ಆಗುತ್ತಿಲ್ಲ ಎಂದರು.
ಸಿದ್ದರಾಮಯ್ಯ ಪದೇ ಪದೇ 25 ಪರ್ಸೆಂಟ್ ಸರ್ಕಾರ ಅಂತಾರೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮನ್ನೆಲ್ಲಾ ಒಟ್ಟೊಟ್ಟಿಗೆ ಸೇರಿಸಿ ಹೇಳಬಾರದು. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳೋದು. ನಮ್ಮ ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗುತ್ತಿದೆ ಎಂದು ಅವರು ಹೇಳಿದರು.