ಪ್ರೀತಿಗೆ ಮನೆಯವರ ವಿರೋಧ: ಅಪ್ರಾಪ್ತರು ನೇಣಿಗೆ ಶರಣು
9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮತ್ತು ಆಕೆಯ ಪ್ರೇಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಶಾಲೆಯ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾಳೆ.
ಇಬ್ಬರೂ ಕಳೆದ ಕೆಲವು ಸಮಯದಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯವರು ಇವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಬೇಸರಗೊಂಡ ಯುವಕ ಬಾಲಕಿಯನ್ನು ಶಾಲೆಯಿಂದ ಕರೆತಂದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.