ಜಲಸಂಪನ್ಮೂಲ ಸಚಿವ ಸ್ಥಾನ ಸಿಗದ ಕಾರಣ ಸಿಟ್ಟಾದ ಎಂ ಬಿ ಪಾಟೀಲ್ ಸಚಿವ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಲಸಂಪನ್ಮೂಲ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ. ಈ ಯೋಜನೆಗಳು ಮುಕ್ತಾಯ ಹಂತದಲ್ಲಿದ್ದು, ಈ ಯೋಜನೆ ಪೂರ್ಣಗೊಳಿಸಲು ತಮಗೆ ಜಲಸಂಪನ್ಮೂಲ ಇಲಾಖೆಯ ಹೊಣೆಯನ್ನೇ ನೀಡುವಂತೆ ಮಾಜಿ ಸಚಿವ ಎಂ ಬಿ ಪಾಟೀಲ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.
ಜಲಸಂಪನ್ಮೂಲ ಇಲಾಖೆ ಹೊಣೆ ಡಿ ಕೆ ಶಿವಕುಮಾರ ಹೆಗಲಿಗೆ ವಹಿಸಿದ ಕಾಂಗ್ರೆಸ್ ಹೈಕಮಾಂಡ, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸೇರಲು ಒಪ್ಪದೆ ಮಾಜಿ ಸಚಿವ ಎಂ ಬಿ ಪಾಟೀಲ್ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.