ಮುಡಾ ಕಡತ ನಾಪತ್ತೆ: ಸಚಿವ ಭೈರತಿ ಸುರೇಶ್ ವಿರುದ್ಧ ದೂರು
ಜುಲೈ 26ರಂದು ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ದಾಖಲೆ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಆ ದಾಖಲೆಗಳನ್ನು ಇಟ್ಟುಕೊಂಡು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದಾರೆ. ದಾಖಲೆಗಳನ್ನು ತೆಗೆದುಕೊಂಡು ಹೋಗಲು ಲೋಕಾಯುಕ್ತ ಎಸ್‌ಪಿ ಕೂಡಾ ಸಹಕರಿಸಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.