ಜೆಡಿಎಸ್‌ನಿಂದ ಮಿಷನ್ 170, ಬಿಜೆಪಿಯಿಂದ ಮಿಷನ್ 150, ಕಾಂಗ್ರೆಸ್?

ಗುರುವಾರ, 7 ಡಿಸೆಂಬರ್ 2017 (15:40 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯುವತ್ತ ರಣತಂತ್ರ ರೂಪಿಸುತ್ತಿವೆ. 

ಜೆಡಿಎಸ್ ಪಕ್ಷ 170 ಸ್ಥಾನಗಳನ್ನು ಗೆಲ್ಲುವ ಮಿಷನ್ ಆರಂಭಿಸಿದ್ದರೆ, ಬಿಜೆಪಿ 150 ಸ್ಥಾನ ಗೆಲ್ಲುವ ಮಿಷನ್ ಆರಂಭಿಸಿವೆ. ಕಾಂಗ್ರೆಸ್ ಪಕ್ಷ ಕೂಡಾ ತಾನೇ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವುದು ಎನ್ನುವ ಹುಮ್ಮಸ್ಸಿನಲ್ಲಿದೆ.
 
ಜೆಡಿಎಸ್ ಬಲಾಡ್ಯ ಕೋಟೆಗಳಾದ ವಿಧಾನಸಭಾ ಕ್ಷೇತ್ರಗಳೊಂದಿಗೆ ಒಟ್ಟು ರಾಜ್ಯದಲ್ಲಿ 170 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಚುನಾವಣೆ ಕಣಕ್ಕಿಳಿಯಲು ನಿರ್ಧರಿಸಿದೆ. ಉಳಿದ 54 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವುದು ಅನುಮಾನ ಎನ್ನುವ ಭೀತಿ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದ 80 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ತುಂಬಾ ಬಲವಿದ್ದು, ಅಭ್ಯರ್ಥಿಗಳು ಜಯ ಸಾಧಿಸುವ ವಿಶ್ವಾಸ ವಿದೆ. ಉಳಿದ 20 ರಿಂದ 30 ಕ್ಷೇತ್ರಗಳಲ್ಲಿ ತೀವ್ರ ಹಣಾಹಣಿ ಎದುರಾಗುವ ನಿರೀಕ್ಷೆಯಿದೆ. ಆದಾಗ್ಯೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ,
 
 ನಾವು ಸ್ವಂತ ಬಲದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ 113 ಸ್ಥಾನಗಳನ್ನು ಪಡೆಯಲು ಚುನಾವಣೆಯಲ್ಲಿ ರಣತಂತ್ರ ರೂಪಿಸಲಿದ್ದೇವೆ ಎಂದರು. 
 
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಅನೇಕ ನಾಯಕರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ಬಿಜೆಪಿ ಕೂಡಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿದೆ. ಹಾಗಾದ್ರೆ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನ ಗೆಲ್ಲಲಿದೆ ಎನ್ನುವುದು ಚುನಾವಣೆ ಫಲಿತಾಂಶ ಬಂದ ನಂತರವೇ ತಿಳಿಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ