ಭಾರತ್ ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಶುಕ್ರವಾರ, 2 ಸೆಪ್ಟಂಬರ್ 2016 (11:23 IST)
ರಾಜ್ಯಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ವಿಧಾನಸೌಧ, ವಿಕಾಸಸೌಧದಲ್ಲಿ ನೌಕರರಿಲ್ಲದೇ ಬಣಗುಡುತ್ತಿದ್ದು, ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಪೀಣ್ಯದಿಂದ ಟೌನ್ ಹಾಲ್‌ವರೆಗೆ ಸಿಐಟಿಯು ನೇತೃತ್ವದಲ್ಲಿ ನಡೆಸುತ್ತಿರುವ ರಾಲಿಯಲ್ಲಿ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದಾರೆ. ಟೌನ್ ಹಾಲ್ ಬಳಿ ಸಾವಿರಾರು ಕಾರ್ಮಿಕರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ  ಬೇಕೇ ಬೇಕು ನ್ಯಾಯ ಬೇಕು, ಕಾರ್ಮಿಕ ವಿರೋಧಿ ನೀತಿಗೆ ಧಿಕ್ಕಾರ, ದಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.  ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ ವರೆಗೆ ಕಾರ್ಮಿಕ ಸಂಘಟನೆಗಳು ರಾಲಿ ನಡೆಸಲು ಉದ್ದೇಶಿಸಿವೆ.  ಮಲ್ಲೇಶ್ವರದಲ್ಲಿ ಗೌರಿ ಗಣೇಶ ಹಬ್ಬದ ಶಾಪಿಂಗ್‌ಗೆ ಬಂದ್ ಬಿಸಿ ತಟ್ಟಿದೆ. ಮಲ್ಲೇಶ್ವರ 8ನೇ ಕ್ರಾಸ್‌ನಲ್ಲಿ ಗ್ರಾಹಕರಿಲ್ಲದೇ ವ್ಯಾಪಾರಿಗಳು ಪರದಾಡುತ್ತಿದ್ದಾರೆ.

ತುಮಕೂರಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 10 ತಾಲೂಕುಗಳಲ್ಲಿ ಬಂದ್ ಯಶಸ್ವಿಯಾಗಿದೆ. ರಾಯಚೂರಿನಲ್ಲಿ ಸರ್ಕಾರಿ ಬಸ್ ಸಂಚಾರ ಬಂದ್ ಆಗಿದ್ದು, ಮಕ್ಕಳು ಗೂಡ್ಸ್ ವಾಹನದಲ್ಲಿ ಶಾಲೆಗೆ ಆಗಮಿಸುವ ಮೂಲಕ ಬಂದ್ ಬಿಸಿ ಮಕ್ಕಳಿಗೂ ತಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ