ಶಾಸಕ A.T. ರಾಮಸ್ವಾಮಿ JDSಗೆ ರಾಜೀನಾಮೆ

ಶುಕ್ರವಾರ, 31 ಮಾರ್ಚ್ 2023 (17:27 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷ ತೊರೆಯುವ ನಾಯಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶುಕ್ರವಾರ ಹಾಸನ ಜಿಲ್ಲೆಯ JDS ನಾಯಕ, ಅರಕಲಗೂಡು ಕ್ಷೇತ್ರದ ಶಾಸಕ A.T. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಅಂತಿಮವಾಗಿ ಇಂದು ಬೆಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ A.T. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 74,411 ಮತಗಳನ್ನು ಪಡೆದ ಕಾಂಗ್ರೆಸ್‌ನ A. ಮಂಜುವನ್ನು ಸೋಲಿಸಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಚಿತ್ರಣವೇ ಬದಲಾಗಿದೆ.. A. ಮಂಜು JDS ಸೇರಿದ್ದಾರೆ. ಅರಕಲಗೂಡು ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಅವರೇ JDS ಅಭ್ಯರ್ಥಿ. ಕ್ಷೇತ್ರದ ಹಾಲಿ ಶಾಸಕ A.T. ರಾಮಸ್ವಾಮಿ ಕಾಂಗ್ರೆಸ್ ಸೇರಲಿದ್ದು, ಕಾಂಗ್ರೆಸ್ ಟಿಕೆಟ್ ಪಡೆಯುವ ಸಾಧ್ಯತೆ ಇದೆ. ಇನ್ನು ರಾಜೀನಾಮೆ ಸಲ್ಲಿಸಿದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ A.T.ರಾಮಸ್ವಾಮಿ, ನಾನು JDS ಬಿಟ್ಟಿಲ್ಲ, ಅವರೇ ಹೊರಗೆ ಹಾಕಿದ್ರು ಎಂದು ತಿಳಿಸಿದ್ರು.. ಜೆಡಿಎಸ್‌ನವರು ನನಗೆ ಶಾಸಕನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ.. ನಾನೇಂದು ವೈಯಕ್ತಿಕ ಲಾಭಕ್ಕಾಗಿ ಆಡಳಿತ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. ನನ್ನ ವಿರೋಧಿಗಳು ಒಳ್ಳೆಯ ಆಶಯವನ್ನು ಹೊಂದಲಿ ಎಂದು ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ