ಆರು ವರ್ಷದ ಬಾಲಕಿ ಮೇಲೆ ರೇಪ್ ಕೇಸ್: ಸಂತ್ರಸ್ತೆ ಮನೆಗೆ ಭೇಟಿ ಕೊಟ್ಟ ಶಾಸಕ ಬೈರತಿ ಬಸವರಾಜ್
ಸ್ಥಳಕ್ಕೆ ಭೇಟಿ ನೀಡಿದ ಅವರು ಬಾಲಕಿಯ ಮನೆಯವರನ್ನು ಭೇಟಿ ಮಾಡಿ ಹೆತ್ತವರಿಗೆ ಧೈರ್ಯ ತುಂಬಿದರು. ಕೆ.ಆರ್.ಪುರ ಕ್ಷೇತ್ರದಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ ಘಟನೆಯನ್ನು ಅವರು ಖಂಡಿಸಿದರು.
ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆರು ವರ್ಷದ ಬಾಲಕಿಯನ್ನು ಬಿಹಾರ ಮೂಲದ ಯುವಕ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಸ್ಥಳೀಯ ಶಾಸಕ ಬೈರತಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಈ ವೇಳೆ ಕೆ.ಆರ್.ಪುರ ಕ್ಷೇತ್ರದ ಉಪಾಧ್ಯಕ್ಷ ಗಣೇಶ್ ರೆಡ್ಡಿ, ವಾರ್ಡ್ ಅಧ್ಯಕ್ಷ ಸತೀಶ್ ಕುಮಾರ್ ಹಾಗೂ ಕ್ಷೇತ್ರದ ಬಿಜೆಪಿ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.