ಶಾಸಕ ಎಂ.ಬಿ.ಪಾಟೀಲ್ ಸಹೋದರ ಈಗ ಎಂಎಲ್ ಸಿ

ಮಂಗಳವಾರ, 11 ಸೆಪ್ಟಂಬರ್ 2018 (17:30 IST)
ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ವಿಜಯಪುರದ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ. ಬಿ. ಪಾಟೀಲ್​ ಅವರ ಸಹೋದರ ಸುನೀಲ್​ಗೌಡ ಪಾಟೀಲ್​ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ ಬೆಂಬಲಿತ ಅಭ್ಯರ್ಥಿ ಗೂಳಪ್ಪ ಶಟಗಾರ್ ವಿರುದ್ಧ 1975 ಮತಗಳ ಭಾರೀ ಅಂತರದಿಂದ ವಿಜಯದ ಮಾಲೆ ಧರಿಸಿದ್ದಾರೆ. ಇದರಿಂದಾಗಿ ಶಾಸಕ ಬಸವರಾಜ್​ ಯತ್ನಾಳ್​ಗೆ ತವರು ಕ್ಷೇತ್ರದಲ್ಲೇ ಭಾರೀ ಹಿನ್ನೆಡೆಯಾಗಿದೆ.

ಸುನೀಲ್​ ಗೌಡ ಅವರ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಜೈಕಾರ ಹಾಕಿ ಸಂಭ್ರಮಾಚರಣೆ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಗೆ ಜೆಡಿಎಸ್ ಬೆಂಬಲ ನೀಡಿತ್ತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ