ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜೀವಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.
ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ, ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ.
ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.
ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ (ಸೆ.19) ಆದೇಶ ಕಾಯ್ದಿರಿಸಿದ್ದಾರೆ.
ಜೀವಬೆದರಿಕೆ, ಜಾತಿನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಅದರಂತೆ ಮುನಿರತ್ನ ಅವರನ್ನು ಸೆಪ್ಟೆಂಬರ್ 14ರಂದು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದರು.