ಎಫ್ಐಆರ್ ದಾಖಲಾಗುತ್ತಿದ್ದಂತೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಶಾಸಕ ಮುನಿರತ್ನ

Krishnaveni K

ಶನಿವಾರ, 14 ಸೆಪ್ಟಂಬರ್ 2024 (14:32 IST)
Photo Credit: Facebook
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪದಲ್ಲಿ ತಮ್ಮ ಮೇಲೆ ಎಫ್ಐಆರ್ ದಾಖಲಾಗುತ್ತಿದ್ದಂತೇ ಬಿಜೆಪಿ ಶಾಸಕ ಮುನಿರತ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ನಾಪತ್ತೆಯಾಗಿದ್ದಾರೆ.

ಗುತ್ತಿಗೆದಾರ ಚೆಲುವರಾಜು ಎಂಬವರು ಮುನಿರತ್ನ ತಮಗೆ 20 ಲಕ್ಷ ರೂ. ನೀಡಲು ಬೆದರಿಕೆ ಹಾಕಿದ್ದರು. ಹಣ ಕೊಡದೇ ಇದ್ದರೆ ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತದೆ ಎಂದಿದ್ದಲ್ಲದೆ, ಜಾತಿನಿಂದನೆ ಮಾಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಗೆ ದೂರು ನೀಡಿದ್ದರು.

 ಈ ಸಂಬಂಧ ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಯತ್ನದಲ್ಲಿದ್ದಾಗ ಮುನಿರತ್ನ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಮೊಬೈಲ್ ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಅವರ ಮನೆ ಬಳಿ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನಲೆಯಲ್ಲಿ ವೈಯಾಲಿಕಾವಲ ಪೊಲೀಸರು ಈಗ ಭದ್ರತೆ ಹೆಚ್ಚಿಸಿದ್ದಾರೆ. ಎಫ್ಐಆರ್ ಹಿನ್ನಲೆಯಲ್ಲಿ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ಸಂಜೆಯಿಂದಲೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ