ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ ನ್ಯಾಯಾಲಯ ಶಾಸಕ ಎಚ್ಡಿ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.
ಮಧ್ಯಂತರ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ ಕೋರ್ಟ್, ಅಂತಿಮವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಕೇಸ್‌ನಲ್ಲೂ ಮೊದಲನೇ ಆರೋಪಿ ಆಗಿರುವ ರೇವಣ್ಣ, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಹಾಜಾರಾಗಿದ್ದರು. ನ್ಯಾಯಾಧೀಶರ ಮುಂದೆಯೇ ಹಾಜರಾಗಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು.