ಸಿದ್ದರಾಮಯ್ಯ ಸ್ಥಾನ ಬಿಟ್ಟು ಕೊಟ್ರೇ ಸಿಎಂ ಆಗ್ತೇನೆ, ಶಾಸಕ ಆರ್ ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Sampriya

ಭಾನುವಾರ, 1 ಸೆಪ್ಟಂಬರ್ 2024 (16:54 IST)
Photo Courtesy X
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಸಂಚಲನ ಮೂಡಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಕುರ್ಚಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಈಗಾಗಲೇ ಸಿಎಂ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಮುಂಚೂಣಿಯಲ್ಲಿರುವುದು ಗೊತ್ತಿರುವ ವಿಚಾರ. ಅದಲ್ಲದೆ ಸಚಿವ ಸತೀಶ್ ಜಾರಕಿಗೊಳಿ, ಸಚಿವ ಎಂಬಿ ಪಾಟೀಲ, ಗೃಹ ಸಚಿವ ಪರಮೇಶ್ವರ್ ಅವರು ಮುಖ್ಯಮಂತ್ರಿ ರೇಸ್‌ನಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಅಚ್ಚರಿ ಎಂಬಂತೆ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್‌ವಿ ದೇಶಪಾಂಡೆ ಅವರು ಮುಖ್ಯಮಂತ್ರಿ ಆಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,   ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ ಎಂಬುದರ ದಾಖಲೆ ಕೊಡಿ. ಸಾವಿರಾರು ಕೋಟಿ ಹಗರಣ ಅಂಥ ಹೇಳುತ್ತಿದ್ದಾರೆ ಹಾಗಿದ್ರೆ ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟರೇ ನಾನು ಮುಂದಿನ ಸಿಎಂ ಆಗುತ್ತೇನೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ತಮ್ಮ ಆಸೆಯನ್ನು ದೇಶಪಾಂಡೆ ವ್ಯಕ್ತಪಡಿಸಿದ್ದಾರೆ.

ನಾನು ಸಚಿವ, ಶಾಸಕನಾಗಿ ದಣಿದಿದ್ದೇನೆ, ಇನ್ನೇನಿದ್ರು ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ