ಜೂನ್ 30 ರೊಳಗೆ ಶಾಸಕರು ಆಸ್ತಿಯ ವಿವರ ಸಲ್ಲಿಸುವುದು ಕಡ್ಡಾಯ: ಲೋಕಾಯುಕ್ತ

ಮಂಗಳವಾರ, 14 ಮಾರ್ಚ್ 2017 (19:05 IST)
ಶಾಸಕರು ಜೂನ್ 30 ರೊಳಗೆ ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ. 
ನಾನು ಲೋಕಾಯುಕ್ತರಾಗಿ ಒಂದುವರೆ ತಿಂಗಳುಗಳು ಕಳೆದಿವೆ. ನನ್ನ ಅಧಿಕಾರದ ವ್ಯಾಪ್ತಿಯಲ್ಲಿ ಮಾಡಲು ತುಂಬಾ ಕೆಲಸವಿದೆ. ಹೆಚ್ಚಿನ ಅಧಿಕಾರ ಬೇಕಾದಲ್ಲಿ ರಾಜ್ಯ ಸರಕಾರಕ್ಕೆ ಪತ್ರ ಬರೆದು ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
 
ಎಲ್ಲಾ ಶಾಸಕರು ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆಸ್ತಿ ವಿವರ ಸಲ್ಲಿಸುವಲ್ಲಿ ವಿಫಲವಾದ ಶಾಸಕರ ವಿವರಗಳನ್ನು ರಾಜ್ಯಪಾಲರಿಗೆ ರವಾನಿಸಲಾಗುವುದು. ಮುಂದಿನ 10 ದಿನಗಳೊಳಗಾಗಿ ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
 
ಆಸ್ತಿ ವಿವರ ಸಲ್ಲಿಸದ ಶಾಸಕರಿಗೆ ನೋಟಿಸ್ ಜಾರಿ ಮಾಡಿ,  ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ