ಭಾರತ್ ಬಂದ್ ವಿಫಲವಾಗಿದೆ ಎಂದ ಶಾಸಕ!
ಮಂಗಳವಾರ, 8 ಜನವರಿ 2019 (18:51 IST)
ಪ್ರಧಾನಿ ನರೇಂದ್ರಮೋದಿ ವಿರುದ್ಧ ಜನರನ್ನು ಎತ್ತಿಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕರೆ ನೀಡಿದ್ದ ಇಂದಿನ ಭಾರತ್ ಬಂದ್ ವಿಫಲವಾಗಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.
ಬಿಜೆಪಿಕ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ, ಎಡ ಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ ವಿಫಲವಾಗಿದೆ. ಮೋದಿ ಅವರ ವಿರುದ್ಧ ಷಡ್ಯಂತ್ರ ಮಾಡಿದ್ದ ಎಡ ಪಕ್ಷಗಳಿಗೆ ದೇಶದ ಜನ ಬಂದ್ ವಿಫಲಗೊಳಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಎಡಪಕ್ಷಗಳ ಜತೆ ಕೈಜೋಡಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೂ ಜನ ಈ ಮೂಲಕ ಪಾಠ ಕಲಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೇಲ್ವರ್ಗದವರಿಗೆ ಮೀಸಲಾತಿ ನೀಡುವ ಪ್ರಧಾನಿ ಮೋದಿ ಅವರ ನಿರ್ಧಾರಿದಂದ ಮೀಸಲಾತಿ ವಿಚಾರದಲ್ಲಿ ಬಡ ಜನರ ಆಕ್ರೋಶ ಸಮಾಧಾನ ಸ್ಥಿತಿಗೆ ಬಂದಿದೆ. ಆದರೆ ದುರ್ದೈವ ಸಂಗತಿ ಎಂದರೆ ಒಂದು ಕಡೆ ಜಾತಿಯನ್ನೇ ಎತ್ತಿಕಟ್ಟಿ ಹೋರಾಟ ಮಾಡಿಸುವವರೆ ಈ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಪರೋಕ್ಷವಾಗಿ ಕಾಂಗ್ರೆಸ್ ಸೇರಿದಂತೆ ದೇಶದ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.