ಶಾಸಕ ಶ್ರೀರಾಮುಲು ನಟ ಯಶ್ ರವರನ್ನು ಭೇಟಿ ಮಾಡಿದ್ಯಾಕೆ?

ಗುರುವಾರ, 7 ಜೂನ್ 2018 (14:47 IST)
ಬೆಂಗಳೂರು : ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಭೇಟಿ ಹಿಂದೆ ಒಂದು ಮುಖ್ಯ ಕಾರಣವಿದೆ. ಅದೇನೆಂದರೆ ಪೇಜಾವರ ಶ್ರೀಗಳು ಇತ್ತೀಚೆಗೆ ಪ್ರಧಾನಿ ಮೋದಿ ಸರ್ಕಾರದ ಸಾಧನೆ ಸಮಧಾನ ತಂದಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದೇರೀತಿ ಹಲವು ಗಣ್ಯರು ಹೇಳಿಕೆಗಳನ್ನು ಕೊಟ್ರೆ ಬಿಜೆಪಿ ಹಿನ್ನಡೆಯಾಗುತ್ತದೆ ಎಂದು ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ನಾಯಕರು ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿರುವ ಗಣ್ಯರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸುತ್ತಿದ್ದಾರೆ.

 

ಅದೇರೀತಿ ಶಾಸಕ ಶ್ರೀರಾಮುಲು ಅವರು ಕೂಡ ಬೆಂಗಳೂರಿನಲ್ಲಿ ನಾರಾಯಣ ಹೃದಯಾಲಯದಲ್ಲಿ ಯಶ್ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿ ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಮೋದಿ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಕೂಡ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ