ರಾಮಲಿಂಗರೆಡ್ಡಿಗೆ ಕೈ ತಪ್ಪಿದ ಸಚಿವ ಸ್ಥಾನ; ಪಕ್ಷದ ವಿರುದ್ಧ ಗರಂ ಆದ ಪುತ್ರಿ,ಶಾಸಕಿ ಸೌಮ್ಯ ರೆಡ್ಡಿ
ಶನಿವಾರ, 22 ಡಿಸೆಂಬರ್ 2018 (11:13 IST)
ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷದ ವಿರುದ್ಧ ಗರಂ ಆಗಿದ್ದಾರೆ.
ಶಾಸಕಿ ಸೌಮ್ಯ ರೆಡ್ಡಿ ಈ ಕುರಿತಾದ ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ. ಆದ್ರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಾದವರಿಗೆ ಹಿಂದೇಟು ಆದರೆ ಬೇಸರವಾಗುತ್ತದೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
‘ನಾನು ಮೊದಲನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇನ್ನೂ ನನ್ನ ಕ್ಷೇತ್ರದ ಹಲವಾರು ಕೆಲಸಗಳು ಮಾಡಲು ನನಗೆ ಬಹಳ ಸಮಯ ಬೇಕಾಗಿದೆ. ನನಗೇ ಪಾರ್ಲಿಮೆಂಟ್ ಸೆಕ್ರೆಟರಿಯ ಸ್ಥಾನಮಾನ ನೀಡಿರುವುದು ಸದ್ಯಕ್ಕೆ ಬೇಡ. ಅದು ಯಾರಿಗೆ ಅವಶ್ಯಕತೆ ಇದೆ ಅವರಿಗೆ ಕೊಡಿ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಕೇವಲ ಒಂದು ಶಾಸಕರಿಂದ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದು, ಈ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಗೆ ಟ್ಯಾಗ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ