MLC ಅವಧಿ ಕೊನೆ : ಮತದಾರರ ಪಟ್ಟಿ ಪರಿಷ್ಕರಣೆ ಶುರು

ಮಂಗಳವಾರ, 1 ಅಕ್ಟೋಬರ್ 2019 (16:55 IST)
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯರ ಅವಧಿಯು ಕೊನೆಗೊಳ್ಳುತ್ತಿರುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ಶುರುವಾಗಿದೆ.  

2020 ರ ಜೂನ್ ಗೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಮುಂದೆ ಚುನಾವಣೆ ಕೈಗೊಳ್ಳಬೇಕಿರುವುದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಪೂರ್ವ ಸಿದ್ಧತಾ ಸಭೆಯು ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಶರತ್  ಅಧ್ಯಕ್ಷತೆಯಲ್ಲಿ ನಡೆಯಿತು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶೀಲ್ದಾರರು ಜಾಗೃತಿ ಮೂಡಿಸಬೇಕು. ರಾಜಕೀಯ ಪಕ್ಷಗಳು ಈ ಬಗ್ಗೆ ಶಿಕ್ಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. 1-11-2019 ರಿಂದ ಹಿಂದಿನ ಆರು ವರ್ಷದ ಅವಧಿಯಲ್ಲಿ ಕನಿಷ್ಠ 3 ವರ್ಷ ಸರ್ಕಾರಿ, ಅರೆ ಸರ್ಕಾರಿ ಮತ್ತು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದವರು ಮಾತ್ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

ಅಪರ ಜಿಲ್ಲಾಧಿಕಾರಿ ಬಿ.ಶರಣಪ್ಪ, ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪೂರ್ವಭಾವಿಯಾಗಿ ಅಕ್ಟೋಬರ್ 1 ರಂದು ತಿಳುವಳಿಕೆ ಪತ್ರ ಹೊರಡಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನವೆಂಬರ್ 6ರೊಳಗೆ ನಮೂನೆ 19ರಲ್ಲಿ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪಾಲಿಕೆಯ ಆಯುಕ್ತರಿಗೆ ಅರ್ಹ ಮತದಾರರು ಅರ್ಜಿ ಸಲ್ಲಿಸಬಹುದು.

ನವೆಂಬರ್ 23 ರಂದು ಕರಡು ಮತದಾರರ ಪಟ್ಟಿ ಸಿದ್ದಪಡಿಸಿ, ಅಕ್ಷೇಪಣೆಗಳಿಗೆ ಆಹ್ವಾನ ನೀಡಲಾಗುವುದು. ನವೆಂಬರ್ 23 ರಿಂದ ಡಿಸೆಂಬರ್ 9ರ ವರೆಗೆ ಅಕ್ಷೇಪಣೆಗಳನ್ನು ಸ್ವೀಕರಿಸಿ ಡಿಸೆಂಬರ್ 26ರೊಳಗೆ ಎಲ್ಲವು ಇತ್ಯರ್ಥಪಡಿಸಿ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ