ಕರಾವಳಿ, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ: ದುರ್ಬಲಗೊಂಡ ನೈರುತ್ಯ ಮುಂಗಾರು

Sampriya

ಸೋಮವಾರ, 16 ಸೆಪ್ಟಂಬರ್ 2024 (13:57 IST)
Photo Courtesy X
ಬೆಂಗಳೂರು: ಇಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ  ಮುನ್ಸೂಚನೆಯನ್ನು ನೀಡಿದೆ.

ರಾಜ್ಯಾದ್ಯಂತ ಮಳೆ ಅಬ್ಬರ  ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  

ಭಾನುವಾರ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟದಲ್ಲಿ 3 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಹೊನ್ನಾವರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ