ಆಧುನಿಕ ಭಗೀರಥ ಕಾಮೇಗೌಡ ನಿಧನ

ಸೋಮವಾರ, 17 ಅಕ್ಟೋಬರ್ 2022 (08:52 IST)
ಮಂಡ್ಯ : ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
 
ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.

ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ