ಮೋದಿ, ಅಮಿತ್ ಶಾ ಎಂದರೆ ಕನಸಲ್ಲೂ ಗಡಗಡ ನಡಗುವ ಸಿದ್ದರಾಮಯ್ಯ– ಡಿವಿಎಸ್
ಮಂಗಳವಾರ, 23 ಜನವರಿ 2018 (16:00 IST)
ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಲ್ಲೂ ಗಡಗಡ ನಡಗುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಬಂದ್ ಮಾಡುವುದು ಸ್ವಾಭಾವಿಕವಾದುದು. ಆದರೆ. ಬಿಜೆಪಿ ಕಾರ್ಯಕ್ರಮವಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪ್ರೇರಿತ ಬಂದ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ಏನೂ ಮಾಡಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿರುವುದರಿಂದ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.