ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

Sampriya

ಮಂಗಳವಾರ, 21 ಅಕ್ಟೋಬರ್ 2025 (17:58 IST)
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಬೇಕಾದ ಹಣವನ್ನು ಸಂಸದರು ಕೇಂದ್ರದ ಬಳಿ ಕೇಳಲ್ಲ.  ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಅವನು ಕೂಡಾ ಕೇಂದ್ರದ ಬಳಿ ಬೇಡಿಕೆಯಿಡಕ್ಕ ಎಂದು ಸಿಎಂ ಸಿದ್ದರಾಮಯ್ಯ ಅಕ್ರೋಶ ಹೊರಹಾಕಿದ್ದಾರೆ. 

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು.

ಆ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಬೇಕಾದ ಹಣವನ್ನು ಸಂಸದರು ಕೇಂದ್ರದ ಬಳಿ ಕೇಳಲ್ಲ.  ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಹಾಗಾಗಿ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಎಂದು ಕರೆ ನೀಡಿದರು. 

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮೇಲೆ ದ್ವೇಷವಿದ್ದು, ಹಾಗಾಗಿ ರಾಜ್ಯಕ್ಕೆ ಹಣ ಬರಲ್ಲ ಎಂದರು. 

ನಾವು ಕೊಟ್ಟಿರುವ ತೆರಿಗೆ ಹಣವನ್ನು ಅವರು ವಾಪಾಸ್ ನೀಡಲ್ಲ.  ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ.

ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಟಾಂಗ್ ಕೊಟ್ಟರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ