ಕಪ್ಪು ಹಣ ಹಾಗೂ ಭಯೋತ್ಪಾದನೆ ತಡೆಗಟ್ಟಲು ಕೇಂದ್ರ ಸರಕಾರ ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿದೆ. ಹಾಗಾದರೇ, ಭಯೋತ್ಪಾದಕರಿಗೆ 2 ಸಾವಿರ ಮುಖಬೆಲೆಯ ನೋಟುಗಳು ಸಿಗುತ್ತಿಲ್ಲವೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದಾರೆ.
ಛಾಯಾಚಿತ್ರ ಪರಿಷತ್‌ನಲ್ಲಿ ಚಿತ್ರಕಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕೆ ಈ ಚಿತ್ರಗಳೇ ಸಾಕ್ಷಿ ಎಂದು ಹೇಳಿದರು.