ರೋಜ್​ಗಾರ್ ಮೇಳಕ್ಕೆ ಮೋದಿ ಚಾಲನೆ

ಶನಿವಾರ, 22 ಅಕ್ಟೋಬರ್ 2022 (16:14 IST)
ಇಂದು ಭಾರತವು 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪವನ್ನು ಈಡೇರಿಸಲು ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ರೋಜ್‌ಗಾರ್ ಮೇಳಕ್ಕೆ ಇಂದು ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ಇಂದು ನೇಮಕಾತಿ ಪತ್ರ ವಿತರಿಸಲಾಗುತ್ತದೆ. ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ UPSC, SSC, ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡಲಾಗುತ್ತಿದೆ. ತ್ವರಿತ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದ್ದು, ತಂತ್ರಜ್ಞಾನವನ್ನು ಸಕ್ರಿಯಗೊಳಿಸಲಾಗಿದೆ ಎಂದು ಮೋದಿ ಹೇಳಿದ್ರು. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ