ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸ್ರಕಾರದ ವಿರುದ್ಧ ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದು, ಕಳೆದ ಆರು ತಿಂಗಳಿಂದ ಮಾಹಿತಿ ಆಯೋಗಕ್ಕೆ ಆಯುಕ್ತರನ್ನೇ ನೇಮಿಸಿಲ್ಲ. ಸರ್ಕಾರದ ಈ ನಡತೆಯೇ ತೋರುತ್ತದೆ ದುರಹಂಕಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಕಳೆದ ದಿನಗಳಲ್ಲಿ ಅಸ್ಥಿತ್ವದಲ್ಲಿದ್ದ ನಮ್ಮ ಯುಪಿಎ ಸರ್ಕಾರದ ಯೋಜನೆಗಳಿಗೆ ಹೊಸ ಪಟ್ಟಿಕಟ್ಟಿ ತಂದಿದ್ದಾರೆಯೇ ಹೊರತು ಹೊಸ ಯೋಜನೆಗಳಿಲ್ಲ ಎಂದ ಅವರು, ಪ್ರಧಾನಿ ಮೋದಿ ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಆಧಾರ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಪ್ರಸ್ತುತ ಅವರೇ ಬೆಂಬಲಿಸುತ್ತಿದ್ದಾರೆ. ಅವರ ಈ ಕಾರ್ಯವೈಖರಿಯೇ ತೋರುತ್ತದೆ ಅವರು ಯೂ-ಟರ್ನ್ ಮಾಡಿದ್ದಾರೆ ಎಂದು ಎಂಬುದಾಗಿ ವಾಗ್ದಾಳಿ ನಡೆಸಿದರು.
ಇದೇ ವೇಳೆ, ಕಳೆದ ಆರು ತಿಂಗಳಿನಿಂದ ಕೇಂದ್ರದ ಮಾಹಿತಿ ಆಯೋಗಕ್ಕೆ ಆಯುಕ್ತರನ್ನೇ ನೇಮಿಸಿಲ್ಲ. ಇದರಿಂದಲೇ ತಿಳಿಯುತ್ತದೆ ಮೋದಿ ನೇತೃತ್ವದ ಸರ್ಕಾರ ದುಹಂಕಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ ಎಂಬ ಕಾರಣದಿಂದ ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ಅನುದಾನದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಕಡಿಮೆ ಅನುಧಾನ ನೀಡಲಾಗಿದೆ ಎಂದು ಆರೋಪಿಸಿದರು.