ಮಹದಾಯಿ ನ್ಯಾಯಾಧಿಕರಣ ತೀರ್ಪು: ಕೇಂದ್ರದ ವಿರುದ್ಧ ಗುಡುಗಿದ ನಾಡೋಜ ಪಾಟೀಲ್ ಪುಟ್ಟಪ್ಪ

ಗುರುವಾರ, 28 ಜುಲೈ 2016 (14:41 IST)
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪಿನ ವಿರುದ್ಧ ರಾಜ್ಯದ ಜನತೆ, ಸರಕಾರದ ವಿರುದ್ಧ ಆದೋಲನ ಮಾಡಬೇಕಾಗುತ್ತದೆ ಎಂದು ಹಿರಿಯ ಸಾಹಿತಿ ನಾಡೋಜ್ ಪಾಟೀಲ್ ಪುಟ್ಟಪ್ಪ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
 
ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಜನರ ಸೇವಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ರಾಜ್ಯದ ಜನತೆ ಸರಕಾರದ ವಿರುದ್ಧ ಆಂದೋಲನ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭೆ ಸದಸ್ಯರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
 
ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭೆ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಚ್ಚರಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಸಾಹಿತಿ ನಾಡೋಜ್ ಪಾಟೀಲ್ ಪುಟ್ಟಪ್ಪ ಆಗ್ರಹಿಸಿದ್ದಾರೆ.

ಗೋವಾ ಸರಕಾರ ಹೇಳಿಕೆಯಲ್ಲಿ ಸತ್ಯಂಶವಿಲ್ಲ: ಬಸವರಾಜ್ ಬೊಮ್ಮಾಯಿ

ಮಹದಾಯಿ ನದಿಯ ನೀರು ಕರ್ನಾಟಕಕ್ಕೆ ಬಿಡುವುದರಿಂದ ಪರಿಸರ ಹಾಳಾಗುತ್ತದೆ. ಪ್ರಾಣಿ ಸಂಕುಲಕ್ಕೆ ತೊಂದರೆಯಾಗುತ್ತದೆ ಎಂದು ಗೋವಾ ಸರಕಾರ ನೆಪ ಹೇಳುತ್ತಿದೆ. ಆದರೆ, ಗೋವಾ ಸರಕಾರದ ವಾದವನ್ನು ಒಪ್ಪಲು ನಾವು ಸಿದ್ಧರಿಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
 
ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆ ವಿವಾದದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ. ಈ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುತ್ತೇವೆ. ವಿವಾದ ಕುರಿತು ಸುಪ್ರಿಂ ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.
 
ಮಹದಾಯಿ ನೀರು ಹಂಚಿಕೆ ಕುರಿತು ಪೂರಕ ಅಭಿಪ್ರಾಯವನ್ನು ನೀಡಲಿಲ್ಲ. ಹಾಗಾಗೀ ಮಧ್ಯಂತರ ಅರ್ಜಿ ಸಲ್ಲಿಸುವಲ್ಲಿ ವಿಳಂಬವಾಗಿದೆ. ಈ ಕುರಿತು ಅರೆ ಮನಸ್ಸಿನಿಂದ ಅರ್ಜಿ ಸಲ್ಲಿಸಿ, ಅರೆ ಮನಸ್ಸಿನಿಂದ ವಾದ ನಡೆಸಿದ್ದಾರೆ ಎಂದು ಕರ್ನಾಟಕ ಪರ ಹಿರಿಯ ವಕೀಲ ನಾರಿಮನ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
 
ನದಿ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಟು ಸತ್ಯ ಹೇಳಿದ್ದಾರೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನದಿ ವಿವಾದದ ಕುರಿತು ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವೆ ಎಂದಿದ್ದರು. ಈಗ ಅವರ ಬಳಿ ನಮಸ್ಯೆ ತೆಗೆದುಕೊಂಡು ಹೋದರೆ ಅವರು ಖಂಡಿತವಾಗಿಯೂ ಸ್ಪಂದಿಸುತ್ತಾರೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ