ಗೋವಿನ ವಿಷಯದಲ್ಲಿ ಕೇಂದ್ರ ಸರಕಾರ ಡಬಲ್ ಗೇಮ್: ಮಲ್ಲಿಕಾರ್ಜುನ ಖರ್ಗೆ

ಸೋಮವಾರ, 22 ಆಗಸ್ಟ್ 2016 (12:14 IST)
ಗೋವಿನ ವಿಷಯದಲ್ಲಿ ಕೇಂದ್ರ ಸರಕಾರ ಡಬಲ್ ಗೇಮ್ ಆಡುತ್ತಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೇ ಗೋವಿನ ರಕ್ಷಣೆ ಮಾಡುತ್ತಾರೆ ಎನ್ನುತ್ತಾರೆ. ಮತ್ತೊಂದೆಡೆ ತಾವೇ ಗೋವುಗಳನ್ನು ಸಾಗಾಟ ಮಾಡುತ್ತಾರೆ. ಪುನಃ ಅವರೇ ಗೋ ಸಾಗಾಟ ಮಾಡುವವರನ್ನು ಕೊಲೆ ಮಾಡುತ್ತಾರೆ. ಇದು ಬಿಜೆಪಿ ನಾಯಕರ ದ್ವಂದ್ವ ನೀತಿಯನ್ನು ತೋರುತ್ತದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಕೆಲವು ವಿಷಯಗಳನ್ನು ರಾಜಕೀಯಗೊಳಿಸಬಾರದು. ಈ ರೀತಿ ಮಾಡುವುದರಿಂದ ಸಾರ್ವಜನಿಕರಲ್ಲಿ ಒಡಕು ಮೂಡಿಸಿದಂತಾಗುತ್ತದೆ ಎಂದು ಹೇಳಿದರು.
 
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಲೋಪಗಳು ಕಂಡುಬಂದರೆ ಸರಕಾರ ಕ್ರಮ ಕೈಗೊಳ್ಳುತ್ತದೆ. ಪ್ರಕರಣ ಕುರಿತು ಬಿಜೆಪಿ ಹಾಗೂ ಎಬಿವಿಪಿ ಅವರ ಬಳಿ ಸಾಕ್ಷಿಗಳಿದ್ದರೆ ಸರಕಾರದ ಗಮನಕ್ಕೆ ತರಲಿ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ