ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳೆದುರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಾರೆಂಟಿ ಮುಗಿಯುತ್ತಾ ಬಂದಿದೆ. ಕಾಂಗ್ರೆಸ್ ಸರ್ಕಾರ ಬರಲಿದೆ, ಜನರಿಗೆ ನ್ಯಾಯದ ಖಾತ್ರಿ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಚೊಂಬು ಚರ್ಚೆ ಜೋರಾಗಿಯೇ ನಡೆಯುತ್ತಿದೆ. ರಾಜ್ಯದ ಕಾಂಗ್ರೆಸ್ ನಾಯಕರು ಕೇಂದ್ರದ ಮೋದಿ ಸರ್ಕಾರ ಕರ್ನಾಟಕಕ್ಕೆ ಶೂನ್ಯ ಕೊಡುಗೆ ನೀಡಿದೆ ಎಂದು ಆರೋಪ ಎಸಗುತ್ತಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣಾ ಪ್ರಚಾರಕ್ಕೆ ಹೋದ ಕಡೆಯೆಲ್ಲ ವಿಶಿಷ್ಟ ರೀತಿಯಲ್ಲಿ ತಮ್ಮ ಕೃತಜ್ಞತೆ ಅರ್ಪಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದಕ್ಕೆ ಸಾಕ್ಷಿ.
ಬಿಜೆಪಿಯ ಧರ್ಮ ರಾಜಕಾರಣದ ವ್ಯಾಲಿಡಿಟಿ ಮುಗಿದಿದೆ. ಕೊಟ್ಟ ಭರವಸೆಗಳಲ್ಲಿ ಒಂದನ್ನೂ ಈಡೇರಿಸದ ಬಿಜೆಪಿಯ ಚೊಂಬು ಸರ್ಕಾರಕ್ಕೆ ಬೆಂಬಲಿಸಲು ಜನರ ಬಳಿ ಕಾರಣಗಳೇ ಇಲ್ಲ.
ಕಾಂಗ್ರೆಸ್ ಗ್ಯಾರಂಟಿಗಳೆದುರು @narendramodi
ಸರ್ಕಾರದ ವಾರೆಂಟಿ ಮುಗಿಯುತ್ತಾ ಬಂದಿದೆ.
ಕಾಂಗ್ರೆಸ್ ಸರ್ಕಾರ ಬರಲಿದೆ,
ಜನರಿಗೆ ನ್ಯಾಯದ ಖಾತ್ರಿ ನೀಡಲಿದೆ.