ಬರ ಪರಿಹಾರದಲ್ಲಿ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಮಹಾಮೋಸ: ಕೈ ನಾಯಕರಿಂದ ಪ್ರತಿಭಟನೆ

Sampriya

ಭಾನುವಾರ, 28 ಏಪ್ರಿಲ್ 2024 (11:51 IST)
Photo Courtesy X
ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ರಾಜ್ಯ ಸಚಿವ ಸಂಪುಟ ಸದಸ್ಯರು, ಶಾಸಕರು ಬೆಳಗ್ಗೆಯೇ ಪ್ರತಿಭಟನೆ ನಡೆಸಿದರು.

ಬರ ಪರಿಹಾರ ನೀಡುವಲ್ಲಿಯೂ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ  ಮಹಾಮೋಸವಾಗಿದೆ ಎಂದು ಆರೋಪಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಚೊಂಬು ಪ್ರರ್ದಶಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಬರಿ ಪರಿಹಾರ ವಿತರಣೆಗೆ ಸರ್ಕಾರ ಮಾಡಿದ್ದ ಬೇಡಿಕೆಗೆ ಅನುಸಾರವಾಗಿ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಇದು ರಾಜ್ಯದ ಬೇಡಿಕೆಯನ್ನು ಪೂರೈಸಲು ಈ ಪರಿಹಾರ ಮೊತ್ತ ಸಾಕಾಗುವುದಿಲ್ಲ. ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಇಂದು ಭಾನುವಾರ ಮತ್ತೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಕೇಂದ್ರದಿಂದ ಬಂದಿರುವ ಪರಿಹಾರ ಕಡಿಮೆಯಾಗಿದೆ ಎಂದು ಇಂದು ಪ್ರತಿಭಟನೆ ಮಾಡುತ್ತಿದ್ದೇವೆ, ರೈತರಿಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನ್ಯಾಯ ಮಾಡುತ್ತಿದ್ದಾರೆ, ಕರ್ನಾಟಕ ಪ್ರತಿವರ್ಷ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ತೆರೆಗೆ ಪಾವತಿಸುತ್ತೇವೆ, ಹೀಗಿರುವಾಗ ರಾಜ್ಯಕ್ಕೆ ಅನ್ಯಾಯ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ