ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ಕ್ಷಣದಲ್ಲಿ ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಇದು ರಾಜ್ಯದಲ್ಲಿ ಸಂಚರಿಸುವ 11ನೇ ವಂದೇ ಭಾರತ್ ರೈಲು ಆಗಿದೆ.
ಇಂದು ಬೆಳಗ್ಗೆ 11:15ಕ್ಕೆ ನಗರದ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಟು ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ.
ಈ ಮೂಲಕ ಉತ್ತರ ಕರ್ನಾಟಕದ ಜನರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಸಂಪರ್ಕಿಸಲಿದೆ. ಈ ರಾಜ್ಯದ ವಂದೇ ಭಾರತ್ ರೈಲಿನ ಜೊತೆ ಎರಡು ಉತ್ತರ ಭಾರತ ರೈಲಿಗೂ ವರ್ಚುವಲ್ ರೈಲುಗಳ ಮೂಲಕ ಚಾಲನೆ ದೊರೆಯಲಿದೆ.
ವೇಳಾಪಟ್ಟಿ ಹೀಗಿದೆ. ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು ತಲುಪುವ ರೈಲು, ಮಧ್ಯಾಹ್ನ 2:20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕಿಸಲಿದೆ. ಪ್ರಯಾಣದ ಅವಧಿ 8:50 ಗಂಟೆ ಇರಲಿದೆ.