ನವೀನ್ ಮೃತದೇಹ ತರಿಸಲು ಮೋದಿ ಸೂಚನೆ
ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
ಇತ್ತ ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿತ್ತು. ಪೋಷಕರು ಹಾಗೂ ಕುಟುಂಬಸ್ಥರು ಮೃತದೇಹ ತಂದುಕೊಡುಂತೆ ಗೋಗರೆಯುತ್ತಿದ್ದರು. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿ ಮೃತದೇಹ ತರುವುದಾಗಿ ಭರವಸೆ ನೀಡಿದ್ದರು.