ದಹಲಿಯಲ್ಲಿ ಸುದ್ದಿಗೊರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ ಹೊಂದಿಲ್ಲ. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಈ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಒಟ್ಟು 135 ಸ್ಥಾನವನ್ನು ಪಡೆದುಕೊಂಡಿದೆ ಆದರೆ, ಬಿಜೆಪಿ ಕೇವಲ 65 ಸ್ಥಾನಗಳನ್ನು ಪಡೆದುಕೊಂಡಿದೆ. ದೇಶದಲ್ಲಿ ಎಲ್ಲ ಜಾತಿಯ ಎಲ್ಲ ವರ್ಗದವರನ್ನು ರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾದ್ಯ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಂದಿನ ಮುಖ್ಯಮಂತ್ರಿ ನಾನೇ ಎನ್ನುವ ರೀತಿ ವರ್ತಿಸುತ್ತಿದ್ದಾರೆ. 2018 ರಲ್ಲೂ ನಾವೇ ಸರಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.