ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿದೆ. ಮುಂಬರುವ ಪಂಚ ರಾಜ್ಯಗಳ ಚುನಾವಣೆ ಸಂಬಂಧ ಚರ್ಚೆ ನಡೆಸಲಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ 124 ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಹಲವಾರು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದರು. ಬೇರೆ ರಾಜ್ಯಗಳ ಸಿಎಂಗಳು, ಸದಸ್ಯರುಗಳು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.