NGO ಕೆಲಸ ಹಾಡಿ ಹೊಗಳಿದ ಮೋದಿ

ಸೋಮವಾರ, 26 ಸೆಪ್ಟಂಬರ್ 2022 (20:20 IST)
ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಬೆಂಗಳೂರಿನ NGO ತಂಡವೊಂದರ ಸಮಾಜಮುಖಿ ಕಾರ್ಯವನ್ನು ಪ್ರಧಾನಿ ಮೋದಿ ಅವರು ಮನ್ ಕೀ ಬಾತ್‌ನಲ್ಲಿ ಪ್ರಶಂಸಿದ್ದಾರೆ. ಬೆಂಗಳೂರಿನ NGO ಯೂತ್ ಫಾರ್ ಪರಿವರ್ತನ್ ನಗರದ ಬಹುತೇಕ ಕಡೆ ಸ್ವಚ್ಛತೆ ಮಾಡುವುದರ ಜೊತೆಗೆ ಅರಿವು ಮೂಡಿಸುತ್ತಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸ್ಥಳೀಯರು ಅಷ್ಟೇ ಅಲ್ಲ ಪ್ರಧಾನಿ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1ನಿಮಿಷಕ್ಕೂ ಹೆಚ್ಚು ಸಮಯ ಈ NGO ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವಕರೇ ಸೇರಿ ಹಲವೆಡೆ ಸ್ವಯಂಪ್ರೇರಿತವಾಗಿ ಸ್ವಚ್ಛತೆ ಮಾಡುವ ಮೂಲಕ ನಗರವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಜನರಿಗೆ ಅರಿವು ಮೂಡಿಸುತ್ತಿದ್ದಾರೆ. ಈ ಸ್ವಯಂ ಸೇವಾ ಸಂಘ 800ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಈಗಾಗಲೇ ಯೂತ್ ಫಾರ್ ಪರಿವರ್ತನ್ ನಗರದ 370ಕ್ಕೂ ಹೆಚ್ಚು ಸ್ಥಳಗಳಲ್ಲಿ ಗೋಡೆಗಳನ್ನು ಸ್ವಚ್ಛಗೊಳಿಸಿ, ಚಿತ್ರಗಳಿಂದ ಆಕರ್ಷಕವಾಗಿ ಅಲಂಕರಿಸಿದೆ. ಪ್ರತಿ ಭಾನುವಾರ ಈ ತಂಡ ಮುಂಚಿತವಾಗಿ ಗುರುತಿಸಿ ಜಾಗವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಾರೆ. ಅಷ್ಟೇ ಅಲ್ಲದೇ ಸಾಕಷ್ಟು ಸರ್ಕಾರಿ ಶಾಲಾ ಮಕ್ಕಳಿಗೆ ಇತ್ತೀಚಿನ ಟೆಕ್ನಾಲಜಿ ಸೇರಿದಂತೆ ಉತ್ತಮ ಜೀವನ ಶೈಲಿಯ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನ ಸಹ ಮಾಡುತ್ತಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ